Homeಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಕೊಡಗಿನ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ: ರೆಡ್ ಅಲರ್ಟ್ ಘೋಷಣೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ್ದು, ಜುಲೈ 31 ಮತ್ತು ಆಗಸ್ಟ್ 1 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.

ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳನ್ನು ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 31 ಮತ್ತು ಆಗಸ್ಟ್ 1 ರಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಎಂದು ಕೊಡಗು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರಿ ಮಳೆಯಿಂದ ಜಿಲ್ಲೆಯ ಕೆಲವು ರಸ್ತೆ ಸಂಪರ್ಕಗಳು ಅಲ್ಲಲ್ಲಿ ಕಡಿತಗೊಂಡಿದ್ದು, ಜುಲೈ 31 ಮತ್ತು ಆಗಸ್ಟ್ 1 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲು ಇಚ್ಛಿಸುವವರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button