ಪ್ರಮುಖ ಸುದ್ದಿ
ಇಬ್ಬರು ಕುಖ್ಯಾತ ಕಳ್ಳರ ಸೆರೆ : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಜಪ್ತಿ
ಯಾದಗಿರಿ : ಕಳೆದ ಅನೇಕ ದಿನಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಕಳ್ಳರನ್ನು ಬಂಧಿಸುವಲ್ಲಿ ಕೊನೆಗೂ ಯಾದಿಗಿರಿ ಪೊಲೀಸರು ಯಶಸ್ವಿ ಆಗಿದ್ದಾರೆ. ನಗರಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 1ಲಕ್ಷ 20ಸಾವಿರ ರೂಪಾಯಿ ಮೌಲ್ಯದ ಚಿನ್ನದ ಸರ ಹಾಗೂ 12ಸಾವಿರ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕುಂಬಾರಹಳ್ಳಿಯ ನಿವಾಸಿಗಳಾದ ಭೀಮರಾಯ ಮತ್ತು ಮಲ್ಲಪ್ಪ ಕಳ್ಳತನ ಆರೋಪದ ಮೇಲೆ ಬಂಧೀತ ಆರೋಪಿಗಳಾಗಿದ್ದಾರೆ. ಯಾದಗಿರಿ ನಗರಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.