ಪ್ರಮುಖ ಸುದ್ದಿ
ಕಾರು ಅಪಘಾತದಲ್ಲಿ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ ನಿಧನ
ಆಂಧ್ರ ಪ್ರದೇಶ: ಕನ್ನಡ ಕಿರುತೆರೆ ನಟಿ ಪವಿತ್ರಾ ಜಯರಾಂ ಅವರು ಭೀಕರ ರಸ್ತೆ ಅಪಘಾತದಲ್ಲಿ ಶನಿವಾರ ಸಾವನ್ನಪ್ಪಿದ್ದಾರೆ.
ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಪರಿಣಾಮ ನಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೂಲತಃ ಮಂಡ್ಯದವರಾದ ಪವಿತ್ರಾ ಅವರು ರೋಬೋ ಫ್ಯಾಮಿಲಿ, ನೀಲಿ, ರಾಧಾ ರಮಣ, ಜೋಕಾಲಿಯಂತಹ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದರು. ಅಷ್ಟೇ ಅಲ್ಲದೆ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ನೆಗೆಟಿವ್ ರೋಲ್ ನಲ್ಲಿ ನಟಿಸುವ ಮೂಲಕ ತೆಲುಗು ಪ್ರೇಕ್ಷಕರ ಗಮನ ಸೆಳೆದಿದ್ದರು.