Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಆಧಾರ್‌ ಕಾರ್ಡ್ ಹೊಂದಿರುವವರಿಗೆ ಬಿಗ್ ಅಪ್ಡೇಟ್; ಏನದು ?ಇಲ್ಲಿದೆ ನೋಡಿ

(aadhaar -card) ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಆಧಾರ್ ಕಾರ್ಡ್ನ ಉಚಿತ ನವೀಕರಣದ ಗಡುವನ್ನು ವಿಸ್ತರಿಸಿದ್ದು, ಈ ಮೊದಲು ಈ ಗಡುವು 14 ಸೆಪ್ಟೆಂಬರ್ 2024 ಆಗಿತ್ತು. ಇದನ್ನು ಈಗ 14 ಡಿಸೆಂಬರ್ 2024 ರವರೆಗೆ ವಿಸ್ತರಿಸಲಾಗಿದೆ. ಆಧಾರ್ ಹೊಂದಿರುವವರು ಮುಂದಿನ 90 ದಿನಗಳವರೆಗೆ ಯಾವುದೇ ಶುಲ್ಕವಿಲ್ಲದೆ ಆನ್ ಲೈನ್ ನಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬಹುದಾಗಿದೆ.

ಆಧಾರ್ ಬಹಳ ಮುಖ್ಯವಾದ ದಾಖಲೆಯಾಗಿದ್ದು, UIDAI ನ ಅಧಿಕೃತ ವೆಬ್‌ ಸೈಟ್ ಪ್ರಕಾರ, ಆಧಾರ್ ಕಾರ್ಡ್‌ದಾರರು ಈಗ ಡಿಸೆಂಬರ್ 14, 2024 ರವರೆಗೆ ಆನ್‌ ಲೈನ್‌ ನಲ್ಲಿ ಮಾಹಿತಿಯನ್ನು ಉಚಿತವಾಗಿ ನವೀಕರಿಸಬಹುದು.

ಯಾರು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಬೇಕು?;
ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಪಡೆಯಲು ಆದಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಆಧಾರ್ ಕಾರ್ಡ್ ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅನ್ನು ಅಪ್ಡೇಟ್ ಮಾಡಿಸಬೇಕು. UIDAI ನೀಡಿದ ಮಾಹಿತಿಯ ಪ್ರಕಾರ, ಡಿಸೆಂಬರ್ 14 ರವರೆಗೆ ಎಲ್ಲಾ 10 ವರ್ಷಗಳ ಹಳೆಯ ಆಧಾರ್ ಕಾರ್ಡ್ ಗಳನ್ನು ಉಚಿತವಾಗಿ ನವೀಕರಿಸಬಹುದಾಗಿದೆ. ಅದರ ನಂತರ ಆಧಾರ್ ಅಪ್ಡೆಟ್ ಮಾಡಲು ನೀವು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನಿಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ನಿಮಗೆ ಕೇವಲ 90 ದಿನಗಳವರೆಗೆ ಅವಕಾಶವಿದೆ.

ಹಾಗಾದರೆ ಹೇಗೆ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ:

ಉಚಿತವಾಗಿ ಆಧಾರ್ ಕಾರ್ಡ್ ಅನ್ನು ನೀವು ಆನ್ ಲೈನ್ ಮೂಲಕವು ಮಾಡಬಹುದಾಗಿದೆ. ಇಲ್ಲವಾದಲ್ಲಿ ನಿಮ್ಮ ಹತ್ತಿರದ ಅಂಚೆ ಕಚೇರಿ, ಆಧಾರ್ ಸೆಂಟರ್ ಗೆ ಭೇಟಿ ನೀಡಿ ಆಪ್ಡೇಟ್ ಮಾಡಿಸಬಹುದಾಗಿದೆ.

ಆನ್ ಲೈನ್ ಅಲ್ಲಿ ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ನೋಡಿ :
* uidai.gov.in ನಲ್ಲಿ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
* ಹೋಮ್‌ ಪೇಜ್‌ ನಲ್ಲಿ, ‘ಮೈ ಅಧಾರ್’ ಟ್ಯಾಬ್ ಅಡಿಯಲ್ಲಿ, ‘ಅಪ್‌ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್’ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು ‘OTP’ ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ‘ಅಪ್‌ ಡೇಟ್ ಆಧಾರ್ ಆನ್‌ ಲೈನ್’ ವಿಭಾಗಕ್ಕೆ ಹೋಗಿ ಮತ್ತು ‘ಅಪ್‌ ಡೇಟ್ ಆಧಾರ್’ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್‌ ಗಳನ್ನು ಅಪ್‌ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್‌ ಮಿಟ್‌ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್‌ ನವೀಕರಣಗೊಳ್ಳುತ್ತದೆ.

Related Articles

Leave a Reply

Your email address will not be published. Required fields are marked *

Back to top button