Homeಜನಮನಪ್ರಮುಖ ಸುದ್ದಿ

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿ ಸೆ. 5ಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐಗೆ ಈ ವಿಷಯದಲ್ಲಿ ತನ್ನ ಪ್ರತಿವಾದ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಿದೆ. ಜೊತೆಗೆ ಕೇಜ್ರಿವಾಲ್‌ಗೆ ಮರು ಅರ್ಜಿ ಸಲ್ಲಿಸಲು ಎರಡು ದಿನಗಳ ಕಾಲಾವಕಾಶವನ್ನೂ ನೀಡಿತು.

ಇನ್ನು ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮುಖ್ಯಮಂತ್ರಿಯ ನ್ಯಾಯಾಂಗ ಬಂಧನವನ್ನು ಆಗಸ್ಟ್ 27 ರವರೆಗೆ ವಿಸ್ತರಿಸಲಾಗಿತ್ತು. ಈ ತೀರ್ಪು ಪ್ರಕಟಗೊಂಡ ಎರಡು ದಿನಗಳ ನಂತರ ಇದೀಗ ಜಾಮೀನು ಅರ್ಜಿಯನ್ನು ಮುಂದೂಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button