Homeಜನಮನಪ್ರಮುಖ ಸುದ್ದಿ

ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್; ಸೂಚನೆಯಲ್ಲಿ ಏನಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ

(Agricultural-Land:) ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿಯೊಂದು ನೀಡಿದೆ. ರೈತರು ಕೃಷಿ ಜಮೀನಿಗೆ ಹೋಗಲು ದಾರಿ ಇಲ್ಲದೆ ಇರುವವರಿಗೆ ದಾರಿ ನೀಡುವ ಕುರಿತು ಮಹತ್ವದ ಸೂಚನೆ ನೀಡಿದೆ.

ಹೌದು, ರೈತರು ತಮ್ಮ ಜಮೀನಿಗೆ ತೆರಳಲು ಅಥವಾ ಕೃಷಿ ಸಲಕರಣೆಗಳನ್ನು ಸಾಗಿಸಲು ರೈತರುಗಳಿಗೆ ತೊಂದರೆಯಾಗುತ್ತಿದ್ದು, ಈ ಕುರಿತು ಹಲವು ದೂರುಗಳು ಕೂಡ ದಾಖಲಾಗಿದೆ. ಅಲ್ಲದೆ ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದರೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿದೆ.

ಸೂಚನೆಯಲ್ಲಿ ಏನಿದೆ?:
1966ರ ನಿಯಮ 59 ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 03 ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ ಹಕ್ಕನ್ನು ಹೊಂದಿದ್ದು ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ. ಅಲ್ಲದೆ Code of Criminal Procedure, 19730 00 147 ರನ್ನಯ ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ, ತಾಲೂಕಿನ ತಹಶೀಲ್ದಾರ್‌ ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ/ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ.

Related Articles

Leave a Reply

Your email address will not be published. Required fields are marked *

Back to top button