ಅಕ್ರಮ ಮರಳು ಸಾಗಾಣಿಕೆ ತಡೆಗೆ ಜಕರಸೇನೆ ಆಗ್ರಹ
ಅಕ್ರಮ ಮರಳು ಸಾಗಾಣಿಕೆ ತಡೆಗೆ ಜಕರಸೇನೆ ಆಗ್ರಹ
yadgiri, ಶಹಾಪುರಃ ಜಿಲ್ಲೆ ಸೇರಿದಂತೆ ಶಹಾಪುರ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಕೂಡಲೇ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ತಾಲೂಕಿನ ಕೃಷ್ಣಾ ನದಿಯ ಮರಳನ್ನು ಅಕ್ರಮವಾಗಿ ಯಾವುದೇ ರಾಜಸ್ವ ಕಟ್ಟದೆ ಸಾಗಾಣಿಕೆ ಮಾಡಲಾಗುತ್ತಿದ್ದರು, ಅಧಿಕಾರಿಗಳು ಜಾಣ ಮೌನವಹಿಸಿದ್ದಾರೆ. ಅಕ್ರಮ ಮರಳು ಸಾಗಾಣಿಕೆಯಲ್ಲಿ ತಾಲೂಕು ಅಧಿಕಾರಿಗಳು ಮತ್ತು ಸಾಗಾಣಿಕೆದಾರರು ಶಾಮೀಲಾಗಿದ್ದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಅಕ್ರಮ ಮರಳು ಧಂದೆಕೋರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಈ ಕುರಿತು ಕ್ರಮ ತೆಗೆದುಕೊಳ್ಳದಿದ್ದರೆ, ಮುಂಬರುವ ದಿನಗಳಲ್ಲಿ ರಸ್ತೆಯಲ್ಲಿ ಅಕ್ರಮ ಮರಳು ಸಾಗಾಟ ಟಿಪ್ಪರ್, ಲಾರಿಗಳನ್ನು ತಡೆಯಲಾಗುವದು ಅಲ್ಲದೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಲಾಗುವದು ಎಂದು ಸೇನೆ ಎಚ್ಚರಿಸಿದೆ.
ಅಕ್ರಮ ಮರಳು ಸಾಗಾಣಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದೆ ಎಂದ ಸೇನೆ, ಕೂಡಲೇ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಸೇನೆ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ಒತ್ತಾಯಿಸಿದ್ದಾರೆ.