Homeಪ್ರಮುಖ ಸುದ್ದಿ
ನಾಳೆಯಿಂದ ಕರ್ನಾಟಕದಲ್ಲಿ 6 ದಿನಗಳ ಕಾಲ ಮದ್ಯ ಮಾರಾಟ ಬಂದ್..!
ಬೆಂಗಳೂರು: ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆ ಹಿನ್ನಲೆ ನಾಳೆಯಿಂದ ಜೂನ್ 6ರ ವರೆಗೆ ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತದೆ.
ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ.ಆದರೆ ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.