Homeಜನಮನಪ್ರಮುಖ ಸುದ್ದಿ
ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

ಧರ್ಮಶಾಲಾ: ಹಿಮಾಚಲ ಪ್ರದೇಶ (Himachal Pradesh)ದ 3 ಜಿಲ್ಲೆಗಳಲ್ಲಿ ಕಂಡುಬಂದ ಮೇಘಸ್ಫೋಟ (Cloudburst)ದಿಂದ ಉಂಟಾದ ದಿಢೀರ್ ಪ್ರವಾಹ (Flash floods)ದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಭಾನುವಾರ 4 ಮೃತದೇಹ ಪತ್ತೆಯಾಗಿದೆ. ಕಾಣೆಯಾದ 40ಕ್ಕೂ ಅಧಿಕ ಮಂದಿ ಇನ್ನೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಜುಲೈ 31ರ ರಾತ್ರಿ ಹಿಮಾಚಲ ಪ್ರದೇಶದ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾ, ಮಂಡಿಯ ಪಧರ್ ಮತ್ತು ಶಿಮ್ಲಾದ ರಾಂಪುರ ಉಪವಿಭಾಗದಲ್ಲಿ ಸರಣಿ ಮೇಘಸ್ಫೋಟ ಸಂಭವಿಸಿತ್ತು. ಕಳೆದ ಐದು ದಿನಗಳಲ್ಲಿ ಉಂಟಾದ ಮೇಘಸ್ಫೋಟ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿನ ಒಟ್ಟು 87 ರಸ್ತೆಗಳ ಸಂಚಾರ ನಿರ್ಬಂಧಿಲಾಗಿದೆ.