ಪ್ರಮುಖ ಸುದ್ದಿ
ಪ್ರವಾಹ : ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ಪರಿಶೀಲನೆ
ಬೆಂಗಳೂರು : ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ನಾಳೆ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ವೈಮಾನಿಕ ಸಮೀಕ್ಷೆ ಮೂಲಕ ಪ್ರವಾಹ ಸ್ಥಿತಿ ಅವಲೋಕಿಸಲಿದ್ದಾರೆ. ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಅಮಿತ್ ಶಾ ಅವರು ಅಧಿಕಾರಿಗಳ ಜತೆ ಸಭೆ ನಡೆಸುವ ಮುನ್ನ ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಈ ವೇಳೆ ಪರಿಹಾರಕ್ಕಾಗಿ ಹೆಚ್ಚಿನ ಹಣ ಕೇಳಿ ಸಿಎಂ ಯಡಿಯೂರಪ್ಪ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.