ಪ್ರಮುಖ ಸುದ್ದಿ
ಕಲಬುರ್ಗಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹತ್ತಿರ ಹತ್ತಿರ ಬಾ ಹಾಡು ಹೇಳಿದ್ಯಾರಿಗೆ?
ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿಂದು ಬಿಜೆಪಿ ನವಕರ್ನಾಟಕ ಪರಿವರ್ತನಾ ಯಾತ್ರೆ ಆಯೋಜಿಸಲಾಗಿತ್ತು. ಹಳೇ ಪೊಲೀಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ, ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್ ಅವರು ಕಾಂಗ್ರೆಸ್ ಪಕ್ಷ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಒಳ ಒಪ್ಪಂದ ಮಾಡಿಕೊಂಡಿವೆ. ಎರಡೂ ಪಕ್ಷದ ಮುಖಂಡರು ಹತ್ತಿರ ಹತ್ತಿರ ಬಾ ಎಂದು ಹಾಡು ಹೇಳುತ್ತಿದ್ದಾರೆ ಎಂದು ಹಾಡು ಹೇಳುವ ಮೂಲಕ ವ್ಯಂಗ್ಯವಾಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ಸಿದ್ಧರಾಮಯ್ಯ ಓರ್ವ ಭಸ್ಮಾಸುರ ಇದ್ದಂತೆ. ಕೆಪಿಸಿಸಿ ಅದ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಸಿಎಂ ಸಿದ್ಧರಾಮಯ್ಯ ಇಬ್ಬರೂ ಒಂದೊಂದು ದಾರಿಯಲ್ಲಿ ಹೊರಟಿದ್ದು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ದೂರಿದ್ದಾರೆ.