ಸಂಸ್ಕೃತಿ
ಅಂಜನಾದ್ರಿ ಪರ್ವತಕ್ಕೆ ಹನುಮ ಭಕ್ತಸಾಗರ, ವಿಶೇಷವೇನು ಗೊತ್ತಾ?
ಕೊಪ್ಪಳ: ಹನುಮ ಜನ್ಮಸ್ಥಳವಾದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದಲ್ಲಿಂದು ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜೆ, ಅರ್ಚನೆ ನಡೆಯಲಿದೆ. ಈ ವಿಶಿಷ್ಟ ದಿನ ಅಂಜನಾದ್ರಿಗೆ ತೆರಳಿ ಹನುಮನ ದರ್ಶನ ಪಡೆದರೆ ಸಕಲ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಹೀಗಾಗಿ, ದೇಶದ ವಿವಿದೆಡೆಯಿಂದ ಹನುಮ ಭಕ್ತರು ಅಂಜನಾದ್ರಿ ಬೆಟ್ಟದತ್ತ ಹೆಜ್ಜೆ ಹಾಕುತ್ತಿದ್ದಾರೆ. ಸಾವಿರಾರು ಸಂಖ್ಯೆಯ ಹನುಮ ಮಾಲಾಧಾರಿಗಳು ಭಜನೆ, ಪವಿತ್ರ ಪ್ರಾರ್ಥನೆಯೊಂದಿಗೆ ಪಾದಯಾತ್ರೆ ಮೂಲಕ ಗಂಗಾವತಿಯ ಅಂಜನಾದ್ರಿ ಪರ್ವತಕ್ಕೆ ತೆರಳುತ್ತಿದ್ದಾರೆ.
ಅಂಜನಾದ್ರಿ ಬೆಟ್ಟ ಇಂದು ಹನುಮ ಭಕ್ತರಿಂದ ತುಂಬಿ ತುಳುಕುತ್ತಿದೆ. ಹೀಗಾಗಿ, ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲೆಡೆ ಬಿಗಿ ಭದ್ರತೆ ಒದಗಿಸಿದೆ. ಹನುಮ ಜಯಂತಿ ಸಂದರ್ಭದಲ್ಲಿ ಶಾಂತಿ ಕದಡುವ ಯಾವುದೇ ಅವಘಡಗಳು ನಡೆಯದಂತೆ ಕಟ್ಟೆಚ್ಚರವಹಿಸಿದೆ.