ಪ್ರಮುಖ ಸುದ್ದಿ
ಅರ್ಹರಿಗೆ ಮಾತ್ರ ಅನ್ನಭಾಗ್ಯ – ಸಿಎಂ ಬಿಎಸ್ ವೈ ಖಡಕ್ ಸೂಚನೆ
ಬೆಂಗಳೂರು : ಅನೇಕ ಸ್ಥಿತಿವಂತರೂ ಸಹ ಬಿಪಿಎಲ್ ಕಾರ್ಡ್ ಬಳಸಿಕೊಂಡು ಅನ್ನಭಾಗ್ಯ ಯೋಜನೆಯ ಫಲ ಪಡೆಯುತ್ತಿದ್ದಾರೆ. ಸುಮಾರು 1.12ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ, ಯೋಜನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವವರನ್ನು ಪತ್ತೆ ಹಚ್ಚುವ ಮೂಲಕ ಅವರನ್ನು ಯೋಜನೆಯಿಂದ ಕೈಬಿಟ್ಟು ಅರ್ಹರಿಗೆ ಯೋಜನೆಯ ಫಲ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿದರು. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲಾಗಿದ್ದು ಪಾರದರ್ಶಕ ಮತ್ತು ದಕ್ಷ ಆಡಳಿತ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.