Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಸಿಹಿ ಸುದ್ದಿ: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಸಮ್ಮತಿಸಿದ ಕೇಂದ್ರ ಸರ್ಕಾರ…!!

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ಕಳೆದ ವರ್ಷ ಕೇಂದ್ರ ತಿರಸ್ಕರಿಸಿತ್ತು. ಇದೀಗ ಈ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ಒಪ್ಪಿಗೆ ನೀಡಿದೆ.
ನಮ್ಮಲ್ಲಿ ಈಗ ಸಾಕಷ್ಟು ದಾಸ್ತಾನು ಇದೆ ಮತ್ತು ಪ್ರತಿ ಕೆ.ಜಿಗೆ ₹ 29 ರಿಂದ ₹ 28ಕ್ಕೆ ಇಳಿಸಿದ್ದೇವೆ. ಕರ್ನಾಟಕಕ್ಕೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿಯಲ್ಲಿ ಅಕ್ಕಿಯನ್ನು ಪೂರೈಸಲು ಕೇಂದ್ರವು ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ