ಪ್ರಮುಖ ಸುದ್ದಿ
ಇಬ್ಬರು ಬಾಲಕಿಯರು ನೀರು ಪಾಲು!
ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮೋಗಾ ತಾಂಡಾದ ಬಾವಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಇಬ್ಬರು ಬಲಕಿಯರು ನೀರು ಪಾಲಾದ ದಾರುಣ ಘಟನೆ ನಡೆದಿದೆ. ಜಯಶ್ರೀ (16) ಹಾಗೂ ಲತಾ ( 14) ಮೃತ ಬಾಲಕಿಯರು ಎಂದು ಗುರುತಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಮೃತರ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.