ಪ್ರಮುಖ ಸುದ್ದಿ
ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಕೋರ್ಟ್
ಬೆಂಗಳೂರು : ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ದ ಅರೆಸ್ಟ್ ವಾರಂಟ್ ಜಾರಿಯಾಗಿದೆ. 42 ನೇ ಎಸಿಎಂಎಂ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದೆ. ಎಸ್ಐಟಿ ಮನವಿ ಪುರಸ್ಕರಿಸಿ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಾರಂಟ್ ಜಾರಿಯಾಗಿದೆ. ಅನೇಕ ಬಾರಿ ಎಸ್‌ಐಟಿ ಪ್ರಜ್ವಲ್ ಗೆ ನೊಟೀಸ್ ನೀಡಿದ್ರು ಪ್ರಜ್ವಲ್ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ, ಎಸ್‌ಐಟಿ ಅರೆಸ್ಟ್ ವಾರಂಟ್ ಜಾರಿಗೆ ಮನವಿ ಮಾಡಿತ್ತು. ಏಪ್ರಿಲ್ 27 ರಂದು ದೇಶ ಬಿಟ್ಟಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ & ಆತ್ಯಾಚಾರ ಪ್ರಕರಣಗಳು ದಾಖಲಾಗಿವೆ.