ಪ್ರಮುಖ ಸುದ್ದಿ
ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಸ್ಥಿತಿ ಗಂಭೀರ : ಏಮ್ಸ್ ಬಳಿ ಬಿಗಿ ಬಂದೋಬಸ್ತ್
ನವದೆಹಲಿ : ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ವೇಳೆ ಬಿಜೆಪಿ ಅದ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಎರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಭೂತಾನ್ ಪ್ರವಾಸದಲ್ಲಿದ್ದು ಅರುಣ್ ಜೇಟ್ಲಿ ಅವರ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆಯಿಂದ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು 10ಗಂಟೆಗೆ ಅಮಿತ್ ಶಾ ಮತ್ತೆ ಏಮ್ಸ್ ಗೆ ಭೇಟಿ ನೀಡಲಿದ್ದಾರೆ. ಅಂತೆಯೇ ಮುಂಜಾಗೃತ ಕ್ರಮವಾಗಿ ಏಮ್ಸ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.