ಪ್ರಮುಖ ಸುದ್ದಿ
ಬಹುಮತ ಸಾಬೀತು ಪಡಿಸುವಲ್ಲಿ ಯಾವುದೇ ಡೌಟಿಲ್ಲ- ದರ್ಶನಾಪುರ
16 ಜನ ಶಾಸಕರ ರಾಜೀನಾಮೆ ಅಂಗೀಕಾರವಾಗಿಲ್ಲ
ಶಹಾಪುರಃ ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸುವ ಕೆಲಸವನ್ನು ನಮ್ಮ ಮುಖ್ಯಮಂತ್ರಿಗಳು ಮತ್ತು ನಮ್ಮ ಪಕ್ಷದ ನಾಯಕರು ಮಾಡಲಿದ್ದಾರೆ. ನಮಗೆ ವಿಶ್ವಾಸವಿದೆ ಸರ್ಕಾರದ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಲಿದ್ದೇವೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ವಿಶ್ವಾಸ ವ್ಯಕ್ತಪಡಿಸಿದರು.
ನಗರ ಜಯಾ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಭಾಗವಹಿಸಿದ್ದ ಅವರು, ಮಾಧ್ಯಮಕ್ಕೆ ಈ ಹೇಳಿಕೆ ನೀಡಿದರು. ನಾವು 117 ಶಾಸಕರಿದ್ದೇವೆ. ಬಿಜೆಪಿಯಲ್ಲಿ 105 ಶಾಸಕರಿದ್ದಾರೆ. ಅತೃಪ್ತರು ವಾಪಸ್ ಆಗಲಿದ್ದಾರೆ ಎಂಬ ಭರವಸೆ ನಮಗಿದೆ. ಬಹುಮತ ಸಾಬೀತು ಪಡಿಸುವಲ್ಲಿ ಯಾವುದೇ ಡೌಟಿಲ್ಲ. ಸೋಮವಾರ ಎಲ್ಲದಕ್ಕೂ ಸ್ಪಷ್ಟ ಉತ್ತರ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.