ಮುಖ್ಯ’ಮಂತ್ರಿ’ : ಮಾಜಿ ಸಿಎಂ ಬಿ.ಡಿ.ಜತ್ತಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ !
ಬೆಂಗಳೂರು : 1958ರಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದ ಬಿ.ಡಿ.ಜತ್ತಿ ಅವರು 1962 ರಲ್ಲಿ ಎಸ್.ನಿಜಲಿಂಗಪ್ಪ ಅವರ ಸಂಪುಟದಲ್ಲಿ ಮತ್ತೆ ಸಚಿವರಾಗಿ ಕೆಲಸ ಮಾಡಿದ್ದರು. ಎಸ್.ನಿಜಲಿಂಗಪ್ಪ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದಿಂದ ಸ್ಪರ್ದಿಸಿ ಸೋಲುಂಡಿದ್ದರು. ಆಗ 1958ರಲ್ಲಿ ಬಿ.ಡಿ.ಜತ್ತಿ ಅವರು ಮುಖ್ಯಮಂತ್ರಿಗಳಾಗಿದ್ದರು. ನಿಜಲಿಂಗಪ್ಪ ಅವರು ಶಿಗ್ಗಾವಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ಬಿ.ಡಿ.ಜತ್ತಿ ಅವರು ನಿಜಲಿಂಗಪ್ಪ ಸಂಪುಟದಲ್ಲಿ ಸಚಿವರಾಗಿದ್ದರು.
ಅಂತೆಯೇ ಬದಲಾದ ರಾಜಕೀಯ ಸನ್ನಿವೇಶದಲ್ಲಿ 2012ರಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ಈಗ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ. ಆ ಮೂಲಕ ಬಿ.ಡಿ.ಜತ್ತಿ ಅವರು ಸಿಎಂ ಆಗಿ ಕಾರ್ಯನಿರ್ವಹಿಸಿದ್ದವರು ಮತ್ತೆ ನಿಜಲಿಂಗಪ್ಪ ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದರು. ಅವರ ನಂತರ ಈಗ ಸಿಎಂ ಆಗಿ ಕಾರ್ಯನಿರ್ವಹಿಸಿದ್ದ ಜಗದೀಶ್ ಅವರೂ ಸಹ ಮಂತ್ರಿ ಆಗಿದ್ದಾರೆ ಎನ್ನಲಾಗಿದೆ.