ಪ್ರಮುಖ ಸುದ್ದಿ
ಬಂಧನ ಭೀತಿಯಿಂದ ಹೊರಬಂದ ಮಾಜಿ ಸಿಎಂ ಹೆಚ್.ಡಿ.ಕೆ!
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು
ಬೆಂಗಳೂರು: ಜಂತಕಲ್ ಮೈನಿಂಗ್ ಕಂಪನಿಗೆ ಪರವಾನಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಐದು ಲಕ್ಷ ರೂಪಾಯಿ ಬಾಂಡ್ , ಎರಡು ಶುರೂಟಿಯನ್ನು ನೀಡಲು ಸೂಚಿಸಿದೆ. ಅಲ್ಲದೆ ಹದಿನೈದು ದಿನಗಳಿಗೊಮ್ಮೆ ಎಸ್ ಐ ಟಿ ಮುಂದೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ. ಅಂತೆಯೇ ಸಾಕ್ಷಾಧಾರಗಳನ್ನು ನಾಶ ಪಡಿಸಕೂಡದು ಎಂದು ತಿಳಿಸಲಾಗಿದೆ. ಹೀಗಾಗಿ, ಹೆಚ್.ಡಿ.ಕೆ ಸದ್ಯ ಬಂಧನ ಭೀತಿಯಿಂದ ಹೊರಬಂದಿದ್ದಾರೆ.