Homeಜನಮನಪ್ರಮುಖ ಸುದ್ದಿ
ಬಸ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಪ್ರಯಾಣಿಕನಿಗೆ ಹಲ್ಲೆ: ಕಂಡೆಕ್ಟರ್ ಅಮಾನತು; ವಿಡಿಯೋ ವೈರಲ್

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬನ ಮೇಲೆ ಚಿಲ್ಲರೆ ಹಾಗೂ ಭಾಷೆ ವಿಚಾರವಾಗಿ ಕಂಡಕ್ಟರ್ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ಘಟನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಕಂಕ್ಟರ್ ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ.
5 ರೂ ಚಿಲ್ಲರೆ ಕೊಡುವ ವಿಚಾರಕ್ಕೆ ಕಂಡಕ್ಟರ್ ಅಭಿನವ್ ರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಅಭಿನವ್ ರಾಜ್ ಹಂಚಿಕೊಂಡಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದರು. ಆಗಸ್ಟ್ 6 ರಂದು ಅಭಿನವ್ ರಾಜ್ ಮೇಲೆ ಹಲ್ಲೆ ನಡೆದಿತ್ತು
ಈ ಘಟನೆಯ ವಿಡಿಯೋ ವೈರಲ್ ಆದ ಹಿನ್ನೆಲೆ ಬಿಎಂಟಿಸಿ ಕಂಡಕ್ಟರ್ ಶ್ರೀನಿವಾಸ್ ಅವರನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ.