ಖಾಸಗಿ ಸುದ್ದಿ ವಾಹಿನಿ ವರದಿಗಾರರ ಮೇಲೆ ಹಲ್ಲೆ- ವ್ಯಾಪಕ ಖಂಡನೆ
ಬಸವ ಕಲ್ಯಾಣದಲ್ಲಿ ನಡೆದ ಘಟನೆಃ ಆರೋಪಿಗಳ ಬಂಧನಕ್ಕೆ ಆಗ್ರಹ
ಖಾಸಗಿ ಸುದ್ದಿ ವಾಹಿನಿ ವರದಿಗಾರರ ಮೇಲೆ ಹಲ್ಲೆಗೆ ಖಂಡನೆ
ಯಾದಗಿರಿ : ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಪೀರ್ ಪಾಷಾ ದರ್ಗಾ ಸುದ್ದಿ ಮಾಡಲು ತೆರಳಿದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಜರುಗಿಸಬೇಕೆಂದು ಒತ್ತಾಯಿಸಿ ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಲ್ಲಿನ ಸುಭಾಷ್ ವೃತ್ತದಲ್ಲಿ ಪತ್ರಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಇದೇ ವೇಳೆ ಮಾತನಾಡಿದ ಪತ್ರಕರ್ತರು, ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಬೇಕು, ಇತ್ತೀಚೆಗೆ ಸುದ್ದಿ ಮಾಡಲು ತೆರಳುವ ಪತ್ರಕರ್ತರ ಮೇಲೆ ಹಲ್ಲೆಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಪತ್ರಕರ್ತರ ಸುರಕ್ಷತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು.
ಸುದ್ದಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡುವವರ ಮೇಲೆ ಕಠಿಣ ಕ್ರಮಗಳು ಜರುಗಿಸಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ವರದಿಗಾರರ ಮೇಲೆ ಹಲ್ಲೆ ನಡೆಸಿದವರು ವಿರುದ್ದ ಕಠಿಣ ಕ್ರಮಕೈಗೊಳ್ಳಲು ತಾವು ಸಲ್ಲಿಸಿದ ಮನವಿಯನ್ನು ರಾಜ್ಯ ಪಾಲರಿಗೆ ಕಳಿಕೊಡಲಾಗುವುದು ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಜಿಲ್ಲಾಡಳಿತದಿಂದ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಆನಂದ ಸೌದಿ, ಲಕ್ಷ್ಮೀಕಾಂತ ಕುಲಕರ್ಣಿ, ಪ್ರವೀಣಕುಮಾರ, ಮಹೇಶ ಕಲಾಲ, ಸಿದ್ದು ಲಿಂಗೇರಿ, ನಾಗಪ್ಪ ನಾಯ್ಕಲ್, ಅಮೀನ ಹೊಸೂರು, ಮಲ್ಲಿಕಾರ್ಜುನರೆಡ್ಡಿ ಹತ್ತಿಕುಣಿ, ಕುಮಾರಸ್ವಾಮಿ ಕಲಾಲ, ರಾಜು ನಲ್ಲಿಕರ್, ಎಸ್.ಎಸ್.ನಾಯಕ, ಭಾಷಾಖಾನ್, ಮಲ್ಲು ಆಶನಾಳ, ಶರಭಣ್ಣ ಯಾದಗಿರಿ, ಮಲ್ಲು ಕಾಮರೆಡ್ಡಿ ಸೇರಿದಂತೆ ಇತರರಿದ್ದರು.