ಪ್ರಮುಖ ಸುದ್ದಿ
ರಾಜ್ಯದ ಪ್ರಾಥಮಿಕ, ಪ್ರೌಢ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಚಿಂತನೆ – BC ನಾಗೇಶ

ರಾಜ್ಯದ ಪ್ರಾಥಮಿಕ, ಪ್ರೌಢ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಚಿಂತನೆ – BC ನಾಗೇಶ
ಮೈಸೂರಃ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಿಂದ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ರಾಶಿನೀತಿ ಜಾರಿಗೊಳಿಸುವ ಕುರಿತು ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ್ ಅವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ರಚಿಸಲಾಗಿದೆ.
ಅಲ್ಲದೆ 1 ನೇ ತರಗತಿಯಿಂದ ಪಿಯುಸಿ ವರೆಗೆ ನಾಲ್ಕು ಹಂತದ ಶಿಕ್ಷಣ ಪಠ್ಯಕ್ರಮ ರೂಪಿಸಲಾಗುವದು. ಈ ಕುರಿತು ಪ್ರತ್ಯೇಕ ಕಮಿಟಿ ರಚನೆ ಮಾಡಲಾಗಿದೆ. ಸಾಧಕ ಬಾಧಕಗಳನ್ನು ಪರಿಗಣಿಸಿ ಕಾರ್ಯರೂಪಕ್ಕೆ ತರಲಾಗುವದು ಎಂದರು.