ಪ್ರಮುಖ ಸುದ್ದಿ
ಪತ್ರಕರ್ತ ರವಿ ಬೆಳಗೆರೆಗೆ ನ್ಯಾಯಾಂಗ ಬಂಧನ!
ಬೆಂಗಳೂರು: ಡಿಸೆಂಬರ್ 23ರವರೆಗೆ ಹಾಯ್ ಬೆಂಗಳೂರ್ ಪತ್ರಿಕೆಯ ಗೌರವ ಸಂಪಾದಕ, ಪತ್ರಕರ್ತ ರವಿ ಬೆಳಗೆರೆಗೆ ನ್ಯಾಯಾಂಗ ಬಂಧನ ವಿಧಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಹಾಗೂ ಅಕ್ರಮ ಶಸ್ತ್ರಾಸ್ತ್ರ ಆರೋಪದಡಿ ಪತ್ರಕರ್ತ ರವಿ ಬೆಳಗೆರೆ ಬಂಧನಕ್ಕೊಳಗಾಗಿದ್ದರು. ನಾಲ್ಕು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿದ್ದ ರವಿ ಬೆಳಗೆರೆ ಅವರನ್ನು ಇಂದು ಕೋರ್ಟಿಗೆ ಹಾಜರುಪಡಿಸಿದ್ದರು.
ರವಿ ಬೆಳಗೆರೆ ಪರ ವಕೀಲ ದಿವಾಕರ್ ಅವರು ಬೆಳಗೆರೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಕೋರಿ 60ಪುಟಗಳ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು. ಹೀಗಾಗಿ, ನ್ಯಾಯಾಲಯ ರವಿ ಬೆಳಗೆರೆಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚನೆ ನೀಡಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ ಎಂದು ತಿಳಿದು ಬಂದಿದೆ.