Homeಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ
ಭ್ರೂಣ ಹತ್ಯೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ. ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಈ ಹಿಂದೆ 50 ಸಾವಿರ ರೂ.
ಬಹುಮಾನ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಗುಪ್ತ ಕಾರ್ಯಾಚರಣೆ ಬಗ್ಗೆ ನಿಖರ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 50 ಸಾವಿರ ರೂ. ಹಾಗೂ ಇನ್ನುಳಿದ 50 ಸಾವಿರ ರೂ. ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಸಿ ಆಯಂಡ್ ಪಿಎನ್ಡಿಟಿ ಶುಲ್ಕದಿಂದ ನೀಡಲು ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.