Bengaluru Jobs: ತಿಂಗಳಿಗೆ 50,000 ಸಂಬಳ- ಈ ಹುದ್ದೆಗೆ ಬೆಂಗಳೂರಿನಲ್ಲಿ ಸಂದರ್ಶನ
NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 31, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್ನಲ್ಲಿ ಸ್ನಾತಕೋತ್ತರ ಪದವಿ, ಸೈಕಿಯಾಟ್ರಿಕ್ ಸೋಷಿಯಲ್ ಸೋಷಿಯಲ್ ವರ್ಕ್ನಲ್ಲಿ ಎಂ.ಫಿಲ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಬೆಂಗಳೂರು
ವೇತನ:
ಮಾಸಿಕ ₹ 50,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅನುಭವ:
ಅಭ್ಯರ್ಥಿಗಳು ಸೋಷಿಯಲ್ ವರ್ಕ್ನಲ್ಲಿ ಕನಿಷ್ಠ 2 ವರ್ಷ ಕ್ಲಿನಿಕಲ್ ಅನುಭವ ಹೊಂದಿರಬೇಕು.
ಸಂದರ್ಶನ ನಡೆಯುವ ಸ್ಥಳ:
ಉಪನ್ಯಾಸ ಸಭಾಂಗಣ-1
1ನೇ ಮಹಡಿ
ಹಳೆಯ ಆಡಳಿತಾತ್ಮಕ ಬ್ಲಾಕ್
ನಿಮ್ಹಾನ್ಸ್
ಬೆಂಗಳೂರು-560029
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 18/05/2024
ಸಂದರ್ಶನ ನಡೆಯುವ ದಿನ: ಮೇ 31, 2024 ಬೆಳಗ್ಗೆ 10 ಗಂಟೆಗೆ