ರಾಜ್ಯದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳ ಖಾತೆಗೆ ಹಣ ಜಮಾ!
(Bhagyalakshmi Yojana) ರಾಜ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ಜಾರಿಗೊಳಿಸಿದ್ದ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಇದೀಗ ಫಲಾನುಭವಿಗಳ ಖಾತೆಗೆ ಶೀಘ್ರವೇ ಮೆಚ್ಯೂರಿಟಿ ಹಣ ಜಮಾ ಮಾಡಲಾಗುತ್ತದೆ.
ಈ ಯೋಜನೆ ಆರಂಭವಾದ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ ಫಲಾನುಭವಿಗಳ ಖಾತೆಗೆ ಶೀಘ್ರವೇ ಮೆಚೂರಿಟಿ ಹಣ ಜಮಾ ಮಾಡಲಾಗುವುದು, ಏಪ್ರಿಲ್ ಮತ್ತು ಮೇ ತಿಂಗಳಾಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿ ಹಣ ಪಡೆಯಲು ಅರ್ಹರಾಗಿದ್ದು, ಇವರೆಲ್ಲರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ.
ಬಡತನ ರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಸರ್ವಾಂಗೀಣ ಅಭಿವೃದ್ಧಿಗೆ ನಿಶ್ಚಿತ ಠೇವಣಿ ಹೂಡಿಕೆ ಮಾಡಿ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಮೆಚ್ಯೂರಿಟಿ ಹಣ ನೀಡುವ ಯೋಜನೆ ಇದಾಗಿದೆ.
ರಾಜ್ಯದಲ್ಲಿ ಆರಂಭದಿಂದ ಇದುವರೆಗೆ 34.50 ಲಕ್ಷ ಮಂದಿ ಭಾಗ್ಯ ಲಕ್ಷ್ಮಿ ಬಾಂಡ್ ಪಡೆದುಕೊಂಡಿದ್ದಾರೆ. ಈಗ ಭಾಗ್ಯಲಕ್ಷ್ಮಿ ಸುಕನ್ಯಾ ಹೆಸರಿನಲ್ಲಿ 4.30 ಲಕ್ಷ ಮಂದಿ ಬಾಂಡ್ ಪಡೆದುಕೊಂಡಿದ್ದಾರೆ.