ಪ್ರಮುಖ ಸುದ್ದಿ
‘ಭಾರತ ರತ್ನ’ ಸ್ವೀಕರಿಸಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಇಂದು ಪ್ರಣಬ್ ಮುಖರ್ಜಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಮರಣೋತ್ತರವಾಗಿ ಸಂಗೀತ ದಿಗ್ಗಜ ಭುಪೇನ್ ಹಜಾರಿಕಾ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭುಪೇನ್ ಹಜಾರಿಕಾ ಅವರ ಪುತ್ರ ತೇಜ್ ಹಜಾರಿಕಾ ಪ್ರಶಸ್ತಿ ಸ್ವೀಕಾರಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉಪಸ್ಥಿತರಿದ್ದರು.