ಪ್ರಮುಖ ಸುದ್ದಿ
ಆಧ್ಯಾತ್ಮ ಗುರು ಭಯ್ಯೂಜಿ ಮಹಾರಾಜ್ ಆತ್ಮಹತ್ಯೆಗೆ ಶರಣಾಗಿದ್ದೇಕೆ?
ಇಂಧೋರ್ : ಮಹಾರಾಷ್ಟ್ರ ಮೂಲದ ಆಧ್ಯಾತ್ಮಿಕ ಗುರು ಭಯ್ಯೂಜೀ ಮಹಾರಾಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ರಾಜಧಾನಿ ಇಂಧೋರ್ ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಮಹಾರಾಜ್ ಮಧ್ಯಪ್ರದೇಶದ ಇಂಧೋರ್ ನಲ್ಲಿ ನೆಲೆಸಿದ್ದರು. ಇತ್ತಿಚೀಗಷ್ಟೇ ಮಧ್ಯಪ್ರದೇಶ ಸರ್ಕಾರ ಐವರು ಸ್ವಾಮಿಜೀಗಳಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿತ್ತು. ಅದರಲ್ಲಿ ಭಯ್ಯೂಜೀ ಮಹಾರಾಜ್ ಕೂಡ ಒಬ್ಬರಾಗಿದ್ದರು.
ಮಹಾರಾಜ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ, ಕೌಟುಂಬಿಕ ಕಲಹದಿಂದಾಗಿ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ತಲೆಗೆ ಗುಂಡು ಹಾರಿಸಿಕೊಂಡಿದ್ದ ಭಯ್ಯೂಜೀ ಮಹಾರಾಜ್ ಅವರನ್ನು ಇಂಧೋರ್ ನ ಬಾಂಬೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.