Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
Gruhalakshmi Update: ಯಜಮಾನಿಯರ ಗೃಹಲಕ್ಷ್ಮಿ ಖಾತೆ ಡಿಲೀಟ್ ಆಗಿದೆಯೋ? ಇಲ್ಲವೋ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(Gruhalakshmi Update) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದಾರೆ.
ತುಮಕೂರಿನ ಬಾಲಭವನ ಆವರಣದಲ್ಲಿ ಹಮ್ಮಿಕೊಂಡಿದ್ದು ಶಿಶು ಮತ್ತು ಚಿಕ್ಕ ಮಕ್ಕಳ ಆಹಾರ ಪದ್ಧತಿಗಳು, ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಯಜಮಾನಿಯರ ಗೃಹಲಕ್ಷ್ಮಿ ಖಾತೆಗಳು ಡಿಲೀಟ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದುವರೆಗೆ ಒಂದೇ ಒಂದು ಖಾತೆ ಕೂಡ ಡಿಲೀಟ್ ಆಗಿಲ್ಲ. ಯಾರು GST, ಟ್ಯಾಕ್ಸ್ ಕಟ್ಟುತ್ತಿದ್ದಾರೋ ಅವರನ್ನು ಆಪ್ ಲೋಡ್ ಮಾಡಿದಾಗಲೇ ಡಿಲೀಟ್ ಆಗಿದೆ ಎಂದರು.
ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದಂತಾಗಿದೆ.