ಪ್ರಮುಖ ಸುದ್ದಿ
ಬಿಟ್ ಕಾಯಿನ್ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ – BSY

ಬಿಟ್ ಕಾಯಿನ್ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ, ಸಿಎಂ ಬದಲಾವಣೆ ಮಾತೇ ಇಲ್ಲ – BSY
ತುಮಕೂರಃ ಬಿಟ್ ಕಾಯಿನ್ ಪ್ರಕರಣ ತನಿಖೆಗೆ ಸಿಎಂ ಬೊಮ್ಮಾಯಿ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾರನಾಡಿದ ಅವರು, ತಪ್ಪಿತಸ್ಥರು ಯಾರೇ ಆಗಿರಲಿ ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ನವರಾಗಲಿ ತಪ್ಪು ಮಾಡಿದ್ದಾರೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ.
ಯಾವುದೇ ಸಿಎಂ ಬದಲಾವಣೆ ವಿಷಯವಲ್ಲ. ಆ ಮಾತೇ ಇಲ್ಲ. ಬೊಮ್ಮಾಯಿ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದರು.
ಬಿಟ್ ಕಾಯಿನ್ ಪ್ರಕರಣ ಪ್ರಧಾನಿಯವರ ಗಮನಕ್ಕೆ ಬಂದಿರುವದು ನಿಜ. ಆದರೆ ಈ ಕುರಿತು ತನಿಖೆಗೆ ಆದೇಶ ನೀಡಲಾಗಿದೆ ಎಂದರು.