Homeಜನಮನಪ್ರಮುಖ ಸುದ್ದಿ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ನಾಳೆ ರಾಜ್ಯದ ಎಲ್ಲಾ ಕಡೆ ಬಿಜೆಪಿ ಪ್ರತಿಭಟನೆ!

ಬೆಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಅವಮಾನ ಮಾಡಿದ ಕಾಂಗ್ರೆಸ್ (Congress) ಕ್ರಮವನ್ನು ಖಂಡಿಸಿ ಹಾಗೂ ಮುಡಾ, ವಾಲ್ಮೀಕಿ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ (BJP) ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ (Sunil Kumar) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ಮಾನ್ಯ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೇ ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದೂ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button