ಪ್ರಮುಖ ಸುದ್ದಿ
ಮಂಗಳವಾರ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಪದಗ್ರಹಣ!
ಬೆಂಗಳೂರು : ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರು ಆಗಸ್ಟ್ 27ರ ಮಂಗಳವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಪದಗ್ರಹಣ ಸಮಾರಂಭ ನಡೆಯಲಿದೆ. ಭಾನುವಾರ ನಡೆಯಬೇಕಿದ್ದ ಪದಗ್ರಹಣ ಸಮಾರಂಭ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದಿಂದ ಮುಂದೂಡಲಾಗಿತ್ತು. ನೂತನ ಅದ್ಯಕ್ಷರಿಗೆ ಬಿ.ಎಸ್.ಯಡಿಯೂರಪ್ಪ ಅಧಿಕಾರ ಹಸ್ತಾಂತರಿಸಲಿದ್ದಾರೆ.