ಪ್ರಮುಖ ಸುದ್ದಿ
ಬಿಜೆಪಿ ನಮ್ಮ ವಿರೋಧ ಪಕ್ಷ, ಜೆಡಿಎಸ್ ಅಲ್ಲ : ಸಿದ್ಧರಾಮಯ್ಯ
ಬೆಂಗಳೂರು : ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ಆ ಮೂಲಕ ದೇವೇಗೌಡರ ಕುಟುಂಬ ಜತೆಗಿನ ಸಮರಕ್ಕೆ ತೆರೆ ಎಳೆಯಲೆತ್ನಿಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.