ಪ್ರಮುಖ ಸುದ್ದಿ
ಲಿಂಗಾಯತ ಸಮುದಾಯದ ಯುವಕ ರಕ್ತದಲ್ಲಿ ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲೇನಿದೆ?
ಬೀದರ್ : ನಗರದ ಬಸವರಾಜ್ ಎಂಬ ಲಿಂಗಾಯತ ಸಮುದಾಯದ ಯುವಕ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿಗೆ ತನ್ನ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಆ ಮೂಲಕ ಲಿಂಗಾಯತ ಸಮುದಾಯ ಹಾಗೂ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು ಎಂದು ಪತ್ರದಲ್ಲಿ ದಾಖಲಿಸಲಾಗಿದೆ.
ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸೂಕ್ತ ಸ್ಥಾನಮಾನ ನೀಡದಿದ್ದ ಪಕ್ಷದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ. ಎಂ.ಬಿ.ಪಾಟೀಲ್ ಅವರ ಮೇಲಿನ ಅಭಿಮಾನದಿಂದಾಗಿ ಲಿಂಗಾಯತ ಸಮುದಾಯದ ಬಸವರಾಜ್ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದಿದ್ದಾನೆ ಎಂದು ತಿಳಿದು ಬಂದಿದೆ.