Homeಜನಮನಪ್ರಮುಖ ಸುದ್ದಿ

BPL Card: ಬಿಪಿಎಲ್ ಕಾರ್ಡ್ ಹೊಂದಿದ ಯುವಕರಿಗೆ ಗುಡ್ ನ್ಯೂಸ್

(BPL Card) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ವಿವಿಧ ಉಚಿತ ತರಬೇತಿಗೆ ಅಜಿಧ ಆಹ್ವಾನಿಸಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ತರಬೇತಿ: ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಹುದ್ದೆಯ ದಿನ: 45 ದಿನ ತರಬೇತಿ ಪ್ರಾರಂಭ ದಿನಾಂಕ: ಜುಲೈ 10

ವಯೋಮಿತಿ: 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, ಅನ್ನು ಸಂಪರ್ಕಿಸಬಹುದಾಗಿದೆ. BPL Card: ಬಿಪಿಎಲ್ ಕಾರ್ಡ್ ಹೊಂದಿದ ಯುವಕರಿಗೆ ಗುಡ್ ನ್ಯೂಸ್ ಇತ್ತೀಚಿನ ಜನಪ್ರಿಯ ಸುದ್ದಿಗಳು

Related Articles

Leave a Reply

Your email address will not be published. Required fields are marked *

Back to top button