ಹೈಕ ಪ್ರದೇಶಕ್ಕೆ ನೇಮಕಗೊಂಡ ನೌಕರರನ್ನು10 ವರ್ಷ ವರ್ಗಾವಣೆ ಮಾಡುವಂತಿಲ್ಲ.!
ನೇಮಕಗೊಂಡ ನೌಕರರು ಇನ್ಮೇಲೆ 10 ವರ್ಷ ಹೈಕ ಭಾಗ ಬಿಡುವಂತಿಲ್ಲ.!
ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಗೊಳ್ಳುವ ನೌಕರರನ್ನು
ಕನಿಷ್ಠ 10 ವರ್ಷ ವರ್ಗಾಯಿಸುವಂತಿಲ್ಲ: ಸರ್ಕಾರದ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರಃ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸರ್ಕಾರಿ ಕಚೇರಿಗಳಿಗೆ ಸ್ಥಳೀಯ ವೃಂದಗಳಲ್ಲಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೆ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತು ಪಡಿಸಿ ಬೇರೆಡೆಗೆ ವರ್ಗಾವಣೆ ಮಾಡಬಾರದೆಂದು ಸಕ್ರಮ ಪ್ರಾಧಿಕಾರಿಗಳಿಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ.
ಸಮಾಜ ಕಲ್ಯಾಣ ಸಚಿವರೂ ಆದ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಲಬುರ್ಗಿ ಜಿಲ್ಲೆಯಲ್ಲಿ 76 ಪ್ರಮುಖ ಹುದ್ದೆಗಳು ಖಾಲಿ ಇದ್ದು,
ತೀರಾ ಹಿಂದುಳಿದಿರುವ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಅಧಿಕಾರಿಗಳನ್ನು ಅಲ್ಪ ಕಾಲದಲ್ಲಿಯೇ ವರ್ಗಾವಣೆ ಮಾಡುತ್ತಿರುವುದರಿಂದ ಈ ಪ್ರದೇಶದ ಅಭಿವೃದ್ಧಿ ಕುಂಠಿತವಾಗಿದೆ ಎಂದು ತಿಳಿಸಿದ್ದರಲ್ಲದೆ, ಹೈದರಾಬಾದ್ ಪ್ರದೇಶಕ್ಕೆ ವರ್ಗಾವಣೆಗೊಳ್ಳುವ ಅಧಿಕಾರಿಗಳು ನಿಗದಿತ ವೇಳೆಯವರೆಗೂ ಕಡ್ಡಾಯವಾಗಿ ಸೇವೆ ಸಲ್ಲಿಸುವಂತೆ ಸಕ್ರಮ ಪ್ರಾಧಿಕಾರಿಗಳಿಗೆ ಸೂಚಿಸಬೇಕೆಂದು ಕೋರಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರ ಈಚೆಗೆ ಹೊರಡಿಸಿರುವ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಆದೇಶದಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸರ್ಕಾರಿ ಕಚೇರಿಗಳಿಗೆ ಸ್ಥಳೀಯ ವೃಂದಗಳಲ್ಲಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೆ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತು ಪಡಿಸಿ ಬೇರೆಡೆಗೆ ವರ್ಗಾವಣೆ ಮಾಡಬಾರದೆಂದು ಸೂಚನೆಯನ್ನು ನೀಡಿದೆ.