ಬಾಂದಾರ ನಿರ್ಮಾಣ ಕಾಮಗಾರಿ ದರ್ಶನಾಪುರರಿಂದ ಪರಿಶೀಲನೆ
1.5 ಕೋಟಿ ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ
ಬಾಂದಾರ ನಿರ್ಮಾಣ ಕಾಮಗಾರಿ ದರ್ಶನಾಪುರರಿಂದ ಪರಿಶೀಲನೆ
1.5 ಕೋಟಿ ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ
yadgiri, ಶಹಾಪುರಃ ತಾಲೂಕಿನ ಹೋತಪೇಟ ಗ್ರಾಮ ಬಳಿಯ ಹಳ್ಳಕ್ಕೆ ಸಣ್ಣ ನೀರಾವರಿ ಇಲಾಖೆಯ 1.5 ಕೋಟಿ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬ್ಯಾರೇಜ್ (ಬಾಂದಾರ) ಕಾಮಗಾರಿ ಸ್ಥಳಕ್ಕೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಗೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಅಂದಾಜು 1.5 ಕೋಟಿ ರೂ. ವೆಚ್ಚದಲ್ಲಿ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟ ಕಾಯ್ದುಕೊಂಡು ಮುಗಿಸುವಂತೆ ಸಂಬಂಧಪಟ್ಟ ಇಲಾಖೆಗೆ ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಗ್ರಾಮದ ನೂರಾರು ಎಕರೆ ಪ್ರದೇಶಕ್ಕೆ ಈ ಬ್ಯಾರೇಜ್ ನಿಂದ ನೀರಾವರಿ ಸೌಲಭ್ಯ ದೊರೆಯಲಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ.
ನೀರನ್ನು ಮಿತವಾಗಿ ಬಳಸಿ ಕೊಂಡು ಬೆಳೆ ಬೆಳೆಯುವುದರೊಂದಿಗೆ ಆರ್ಥಿಕವಾಗಿ ಸದೃಢರಾಗಬೇಕು. ರೈತರು ಬೇಕಾಬಿಟ್ಟಿಯಾಗಿ ಜಮೀನಿನಲ್ಲಿ ನೀರನ್ನು ಹರಿಸಿದರೆ, ಭೂಮಿ ಫಲವತ್ತತೆ ಕಳೆದುಕೊಳ್ಳಲಿದೆ. ಮಣ್ಣು, ಬೀಜ, ಗೊಬ್ಬರ ಹರಿದು ಹೋಗುವುದನ್ನು ತಡೆಗಟ್ಟಲು ನೀರನ್ನು ಮಿತವಾಗಿ ಬಳಸುವಂತೆ ರೈತರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಹುಲ್ಕಲ್, ತಾಲ್ಲೂಕ ಪಂಚಾಯತ ಮಾಜಿ ಅಧ್ಯಕ್ಷ ಶಿವಮಾಂತಪ್ಪ ಸಾಹು ಚಂದಾಪುರ, ನ್ಯಾಯವಾದಿ ಚಂದ್ರಶೇಖರ ಲಿಂಗದಳ್ಳಿ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.