ಪ್ರಮುಖ ಸುದ್ದಿ
ಯಾದಗಿರಿ ಸೇರಿ 4ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ
ಬೆಂಗಳೂರು : ನೆರೆ ಹಾವಳಿ ಪ್ರದೇಶಗಳಲ್ಲಿ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರುವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಯಾದಿಗಿರಿ, ರಾಯಚೂರು, ಬಾಗಲಕೋಟೆ, ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಯ ಜಿಂದಾಲ್ ಏರ್ಪೋರ್ಟ್ಗೆ ತೆರಳಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ನಾಳೆ ಮಧ್ಯಾಹ್ನ 12 ಗಂಟೆಗೆ ವಿಜಯಪುರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದು ನೆರೆ ಹಾನಿ ಬಗ್ಗೆ ಮಾಹಿತಿ ಪಡೆದು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚಿಸಿ ಮದ್ಯಾನ 3ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.