ಪ್ರಮುಖ ಸುದ್ದಿ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಭಾರತೀಯ ಜನತಾ ಪಕ್ಷದ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನಿನ್ನೆ ರಾತ್ರಿ ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಶೀತ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವ ಯಡಿಯೂರಪ್ಪ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಖ್ಯಾತ ವೈದ್ಯ ಡಾ .ಪ್ರಮೋದ್ ಅವರು ಬಿ.ಎಸ್.ಯಡಿಯೂರಪ್ಪ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಕ್ತದೊತ್ತಡ ಹೆಚ್ಚಾಗಿದ್ದು ಶೀತ, ಜ್ವರ ಇದೆ. ಹೀಗಾಗಿ, ಒಂದು ದಿನಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಬಳಿಕ ಬಿ.ಎಸ್.ವೈ ಗೆ ಕೊಂಚ ವಿಶ್ರಾಂತಿಯ ಅಗತ್ಯವಿದೆ. ಆದರೆ, ಆತಂಕ ಪಡುವಂತ ಯಾವುದೇ ತೊಂದರೆ ಇಲ್ಲ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದೆ.