ಬಸನಗೌಡ ಯತ್ನಾಳ ಮರಳಿ ಬಿಜೆಪಿಗೆ.?
BSY ಮತ್ತು BPY ನಡುವೆ ನಡೆದ ಮಾತುಕತೆ ಏನು.?
ಬಸನಗೌಡ ಯತ್ನಾಳ ಬಿಜೆಪಿಗೆ ಮರಳಲಿದ್ದಾರಾ..?
ವಿಜಯಪುರಃ ಮಾಜಿ ಸಂಸದ ಬಸನಗೌಡ ಪಾಟೀಲ್ ಶಿವಸೇನೆ ಸೇರಲಿದ್ದಾರೆ ಎಂಬ ವಿಷಯ ತಿಳಿದು ಇಂದು ವಿಜಯಪುರಕ್ಕೆ ಆಗಮಿಸಿದ ಯಡಿಯೂರಪ್ಪ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಯತ್ನಾಳ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಸುಧೀರ್ಘ ಚರ್ಚೆ ನಡೆಸಿದ ಅವರು, ಯತ್ನಾಳ ಅವರನ್ನು ಮರಳಿ ಬಿಜೆಪಿಗೆ ತರಲು ಚಿಂತನೆ ನಡೆಸುತಿದ್ದಾರೆ ಎನ್ನಲಾಗಿದೆ.
ಬಿಜೆಪಿ ಪರಿವರ್ತನಾ ಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಸಂಚರಿಸಲಿರುವ ಕಾರಣ ಯಡಿಯೂರಪ್ಪನವರು ಜಿಲ್ಲೆಯಲ್ಲಿಯೇ ಮೂರು ದಿನ ತಂಗಲಿದ್ದಾರೆ.
ಯತ್ನಾಳ ಅವರಿಗೆ ಈ ಹಿಂದೆ ಬಿಜೆಪಿಯಿಂದ 6 ವರ್ಷಗಳ ಉಚ್ಛಾಟನೆ ಮಾಡಲಾಗಿತ್ತು. ಮಾತುಕತೆಯ ನಂತರ ಉಚ್ಛಾಟನೆ ಆದೇಶ ಹಿಂಪಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಇಂದು ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಂಸದ ಹಾಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ ಮಧ್ಯೆ ನಡೆಯುತ್ತಿರುವ ಮಾತುಕತೆ ಫಲಪ್ರಧವಾಗಲಿದೆ ಎಂಬುದು ಬಿಜೆಪಿಯ ಜಿಲ್ಲಾ ನಾಯಕರ ಅಭಿಪ್ರಾಯವಾಗಿದೆ.