ಪ್ರಮುಖ ಸುದ್ದಿ
ಎರಡು ದಿನದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ – ಸಿಎಂ ಯಡಿಯೂರಪ್ಪ
ಬೆಂಗಳೂರು : ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ಉಸ್ತುವಾರಿ ವಹಿಸುವಂತೆ ನೂತನ ಸಚಿವರಿಗೆ ಸೂಚಿಸಿದ್ದೇನೆ. ಅಂತೆಯೇ ಸಚಿವರು ಇಂದೇ ಪ್ರವಾಹ ಪೀಡಿತ ಜಿಲ್ಲೆಗಳಿಗೆ ತೆರಳಿದ್ದಾರೆ. ಇನ್ನೆರಡು ದಿನಗಳ ಒಳಗೆ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ನಗರದ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಡಾ.ನಿರ್ಮಲಾನಂದ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.