ಪ್ರಮುಖ ಸುದ್ದಿ

ಚುನಾವಣೆಗೆ ಬಿಜೆಪಿ ಸಿದ್ಧ, BSY ಸಿಎಂ ಅಬ್ಯರ್ಥಿ: ಮುರುಳೀಧರರಾವ್

ಚುನಾವಣೆಗೆ ರಾಜ್ಯ ಬಿಜೆಪಿ ಸಿದ್ಧಃ ಮುರುಳೀಧರರಾವ್ ಘೋಷಣೆ

ಹುಬ್ಬಳ್ಳಿ: ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಘಟಕ ಸಜ್ಜಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ತಿಳಿಸಿದ್ದಾರೆ.

ಹುಬ್ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕ್ಷಣ ರಾಜ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅದನ್ನು ಸಮರ್ಥವಾಗಿ ಎದುರಿಸಲು ಬಿಜೆಪಿ ರಾಜ್ಯ ಘಟಕ ಸಿದ್ಧವಿದೆ. ಯಡಿಯೂರಪ್ಪನವರು ನಮ್ಮ ಸಿ.ಎಂ.ಅಭ್ಯರ್ಥಿ, ಕಾಂಗ್ರೆಸ್ ದುರಾಡಳಿತ ಕೊನೆಗಾಣಿಸಿ, ಮುಕ್ತ ಸರ್ಕಾರ ನೀಡುವುದು ಬಿಜೆಪಿ ಗುರಿ.

ಕಾಂಗ್ರೆಸ್ ಪಕ್ಷದ ವಂಶಾಡಳಿತವನ್ನು ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದು ದುರಾದೃಷ್ಟಕರ. ಆದರೆ ಬಿಜೆಪಿ ಯಾವುದೇ ಕುಟುಂಬ ರಾಜಕಾರಣ ಮಾಡುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಬಿಜೆಪಿ ಬಗ್ಗೆ ಮಾತನಾಡುವ ಅಧಿಕಾರವಿಲ್ಲ ಎಂದ ಅವರು, ದೇಶದ ಕಾಂಗ್ರೆಸ್ ಪಕ್ಷವೇ ರಾಹುಲ್ ಗಾಂಧಿ ಜೇಬಿನಲ್ಲಿದೆ ಎಂದು ವ್ಯಂಗವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನತೆ ರೋಸಿ ಹೋಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಂಶೊಧಕ ಎಮ್.ಎಮ್ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಕೊಲೆ ಸೇರಿದಂತೆ ಹಿಂದೂ ಮುಖಂಡರ  ಕೊಲೆಗಳು ನಡೆಯುತ್ತಿವೆ. ಇಲ್ಲಿವರೆಗೂ ಕೊಲೆಗಡುಕರನ್ನು ಹಿಡಿಯುವಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ಸಫಲವಾಗಿಲ್ಲ ಎಂದು ದೂರಿದರು.

ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ . ರಾಜ್ಯದಲ್ಲಿ ಅರಾಜಕತೆ ಹೆಚ್ಚಾಗಿದೆ. ನಾವು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿದ್ದೇವೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ರಾಜ್ಯ ಸರ್ಕಾರ ಪ್ರಕರಣದ ತನಿಖೆಯ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ನಿಂದ ರಾಷ್ಟ್ರದ ಭದ್ರತಾ ವ್ಯವಸ್ಥೆಗೆ ಆತಂಕವಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಸರ್ಕಾರ ನಾಚಿಕೆಗೇಡಿತನದಿಂದ ವರ್ತಿಸುತ್ತಿದೆ.
ಮಹದಾಯಿ ವಿಷಯದಲ್ಲಿ ನಾವು ರಾಜ್ಯದ ರೈತರ ಪರವಾಗಿದ್ದೇವೆ. ಮಹದಾಯಿ ವಿಷಯದಲ್ಲಿ ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ತಯಾರಿದ್ದೆವೆ ಎಂದರು.

ಆದ್ರೆ ಮಹದಾಯಿ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ಇದು ಖಂಡನೀಯ. ಅಲ್ಲದೆ ನಾವು ಗೋವಾ ರಾಜ್ಯದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಒಪ್ಪಿಸುತ್ತೆವೆ .
ಸಿದ್ದರಾಮಯ್ಯ ಅವರು ಗೋವಾ ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರನ್ನು ಒಪ್ಪಿಸಲಿ ಎಂದು ಆಗ್ರಹಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button