ಪ್ರಮುಖ ಸುದ್ದಿ
ನಾವಿಬ್ಬರು ರಾಮ ಲಕ್ಷ್ಮಣರು…!
ಬಿಜೆಪಿ ಚಾಣಕ್ಯ ಅಮಿತ್ ಶಾ ಎಫೆಕ್ಟ್!?
ಕಾರವಾರ: ಬಿ.ಎಸ್.ಯಡಿಯೂರಪ್ಪ ಮತ್ತು ನಾನು ರಾಮ-ಲಕ್ಷ್ಮಣರಿದ್ದಂತೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ನಾವಿಬ್ಬರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ಯಡಿಯೂರಪ್ಪ ಅವರು ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಟ್ಟಾಗಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.
ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಿಂದ ಪಕ್ಷ ಟಿಕೆಟ್ ನೀಡಿದರೆ ಸ್ಪರ್ದಿಸುತ್ತೇನೆ. ಇಲ್ಲವಾದಲ್ಲಿ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ. ಈ ಬಾರಿ ಯಾರಿಗೆ ಯಾವ ಕ್ಷೇತ್ರದಿಂದ ಪಕ್ಷದ ಟಿಕೆಟ್ ನೀಡಬೇಕೆಂಬುದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಿರ್ಧರಿಸಲಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.