ಪ್ರಮುಖ ಸುದ್ದಿ
ಬಿಜೆಪಿ ಅಧಿಕಾರಕ್ಕೇರಿದ 24ಗಂಟೆಗಳಲ್ಲಿ ಸಿದ್ಧರಾಮಯ್ಯ ವಿರುದ್ಧ ಕ್ರಮ – ಬಿ.ಎಸ್.ಯಡಿಯೂರಪ್ಪ
ದಾವಣಗೆರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಎಸಿಬಿಯಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ. ಆದರೆ, ಈಗಾಗಲೇ ಸಿದ್ಧರಾಮಯ್ಯ ಮಾಡಿದ ಹಗರಣಗಳ ಬಗ್ಗೆ ಬಿಜೆಪಿಯಿಂದ ಚಾರ್ಜ್ ಶೀಟ್ ರೆಡಿ ಆಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿದ 24ಗಂಟೆಗಳಲ್ಲಿ ಸಿದ್ಧರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆಗ ಸಿದ್ಧರಾಮಯ್ಯ ಸಿಎಂ ಆಗಿದ್ದು ಎಸಿಬಿಯಿಂದ ಕ್ಲೀನ್ ಚಿಟ್ ಪಡೆದುಕೊಂಡಷ್ಟು ಸುಲಭವಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ದಾವವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಪರಿವರ್ತನಾ ಯಾತ್ರೆ ಉದ್ಘಾಟಿಸಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು. ಜಾತಿಯ ವಿಷ ಬೀಜ ಬಿತ್ತಿ ಸಿದ್ಧರಾಮಯ್ಯ ರಾಜ್ಯವನ್ನು ಒಡೆಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮೈಸೂರಿನಲ್ಲಿ ಸಿದ್ಧರಾಮಯ್ಯ ಅದ್ಹೇಗೆ ಗೆಲ್ಲುತ್ತಾರೆ ಎಂದು ನಾನೂ ನೋಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.