ಪ್ರಮುಖ ಸುದ್ದಿ
ಸಿಎಂ ಜೊತೆ ಬಹಿರಂಗ ಚರ್ಚೆಗೆ ಬರೋದಿಲ್ಲ ಅಂದರು ಬಿ.ಎಸ್.ಯಡಿಯೂರಪ್ಪ?
ಮೂಸೂರು : ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ರಾಜ್ಯವನ್ನು ಲೂಟಿ ಮಾಡಿದೆ. ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜೊತೆ ಅದೆಂಥ ಬಹಿರಂಗ ಚರ್ಚೆ ಮಾಡುವುದು. ಸಿದ್ಧರಾಮಯ್ಯ ಅಂಥವರ ಜೊತೆ ಬಹಿರಂಗ ಚರ್ಚೆ ಮಾಡೋದಿಲ್ಲ. ಅವರ ಪಾಪದ ಕೊಡ ತುಂಬಿ ಆಗಿದೆ. ರಾಜ್ಯದ ಜನರೇ ಅವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಜೊತೆಗೆ ಭ್ರಷ್ಟಾಚಾರ ಮತ್ತು ಆಡಳಿತ, ಅಭಿವೃದ್ಧಿಯ ವಿಷಯದಲ್ಲಿ ಬಹಿರಂಗ ಚರ್ಚೆಗೆ ಸಿದ್ಧವಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಪಂಥಾಹ್ವಾನ ನೀಡಿದ್ದರು. ಸಿದ್ಧರಾಮಯ್ಯ ಅವರ ಬಹಿರಂಗ ಚರ್ಚೆಯ ಆಹ್ವಾನವನ್ನು ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರಸ್ಕರಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಭ್ರಷ್ಟಾಚಾರದಲ್ಲಿ ಮುಳುಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಕಿಡಿ ಕಾರಿದ್ದಾರೆ.