ಪ್ರಮುಖ ಸುದ್ದಿ
ಕಲ್ಯಾಣ ಕರ್ನಾಟಕ ಉತ್ಸವ : ಕಲಬುರಗಿಗೆ ಸಿಎಂ ಯಡಿಯೂರಪ್ಪ ಭೇಟಿ ಹಿನ್ನೆಲೆ ಬಿಗಿ ಭದ್ರತೆ
ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್. ಜಿಲ್ಲಾಧಿಕಾರಿ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಹಾಗೂ ಡಿಸಿಪಿ ಬಿ. ಕಿಶೋರಬಾಬು ಅವರು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಭದ್ರತೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳುವುದು, ಪೊಲೀಸ್‍ರಿಂದ ಗೌರವ ವಂದನೆ ಸಲ್ಲಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.