ಪ್ರಮುಖ ಸುದ್ದಿ
ಕಲಬುರಗಿ : ಬಸ್ ಮತ್ತು ಬೈಕ್ ನಡುವೆ ಡಿಕ್ಕಿ, ಇಬ್ಬರು ಸಾವು
ಕಲಬುರಗಿ: ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಸಮೀಪ ನಡೆದಿದೆ. ಬಸ್ ನಲ್ಲಿದ್ದವರು ಸುರಕ್ಷಿತವಾಗಿದ್ದಾರೆ. ಮೃತರು ಕೋಡ್ಲಾ ಗ್ರಾಮದ ಸಿದ್ದಪ್ಪ ಕುಂಬಾರ (17) ಮತ್ತು ಅಶೋಕ್ ಗುತ್ತೇದಾರ್ (24) ಎಂದು ಗುರುತಿಸಲಾಗಿದೆ.
ಅಪಘಾತ ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇಡಂ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಪೊಲೀಸರ ತನಿಖೆಯಿಂದಾಗಿ ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದು ಬಯಲಾಗಬೇಕಿದೆ.