ಪ್ರಮುಖ ಸುದ್ದಿ
ಯಾದಗಿರಿ: KSRTC ಬಸ್ & ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ!
ಯಾದಗಿರಿ: ಸುರಪುರ ತಾಲೂಕಿನ ಅಗತೀರ್ಥ ಗ್ರಾಮದ ಸಮೀಪ ಸಾರಿಗೆ ಬಸ್ ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಗೂಡ್ಸ್ ವಾಹನ ಚಾಲಕ ರಂಜಾನ್ (40) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಸ್ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಇಬ್ಬರು ಗಾಯಾಳುಗಳನ್ನು ಕೆಂಭಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದವರು ಸುರಕ್ಷಿತವಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೆಂಬಾವಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.