ಪ್ರಮುಖ ಸುದ್ದಿ
ರಾಜ್ಯದಲ್ಲಿ ರದ್ದಾಗುತ್ತಾ ನೀಟ್ ಪರೀಕ್ಷೆ..? – ಡಿಸಿಎಂ ಡಿಕೆಶಿ ಹೇಳಿದ್ದೇನು?
ಬೆಂಗಳೂರು : ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯವಾಗುತ್ತಿರುವುದರಿಂದ ಕರ್ನಾಟಕವೂ ತಮಿಳುನಾಡಿನ ಮಾದರಿಯನ್ನು ಅನುಸರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನೀಟ್ ಪರೀಕ್ಷೆಯಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗುತ್ತಿದೆ. ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹೀಗಾಗಿ, ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ ಎಂದು ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.